ಆದಾಯ ತೆರಿಗೆ ಇಲಾಕೆಯವರು ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಕೋಟ್ಯಾಂತರ ರೂಪಾಯಿ ಕರ್ಚು ಮಾಡಿ ರಿಟರ್ನ್ ಪೈಲ್ ಮಾಡೊಕ್ಕೆ ಅವಕಾಶ ಆಗ್ಲಿ ಅಂತ ವ್ಯವಸ್ತೆ ಮಾಡಿದ್ದರು, ಅಶ್ಟು ಕರ್ಚು ಮಾಡಿದ್ರು ಅದು ಬರೆ ಕೆಲವೇ ಕೆಲವು ಮಂದಿಗೆ ಉಪಯೋಗವಾಗುವಂತಿದ್ದುದ್ದು ಮಾತ್ರ ದುರದ್ರುಶ್ಟಕರ. ಹೇಗೆ ಅಂತಿರ? ಮುಂದೆ ಓದಿ......
ಕಳೆದ ವಾರ ನನಗೆ ತಿಳಿದವರೊಬ್ಬರು ಐಟಿ ರಿಟರ್ನ್ ಪೈಲ್ ಮಾಡೊಕ್ಕೆ ಅಂತ ಅರಮನೆ ಮೈದಾನಕ್ಕೆ ಹೋದವರು ದಂಗಾಗಿ ಮನೆಗೆ ವಾಪಸ್ ಬಂದು, ಯಾರಾದ್ರು ಸಿಎ ಗೊತ್ತಿದ್ದ್ರೆ ಹೇಳಪ್ಪ ಅಂತ ನನ್ನ ಕೇಳಿದ್ರು, ಅದಕ್ಕೆ ನಾನು ಸಿಎ ಹತ್ತಿರ ಯಾಕೆ ಹೋಗ್ತಿರಾ, ಸುಮ್ನೆ ಅರಮನೆ ಮೈದಾನಕ್ಕೆ ಹೋಗಿ ಅಲ್ಲಿ ಎಲ್ಲಾ ಆರಾಮಗಿ ಆಗುತ್ತೆ ಅಂದೆ. ಅದಕ್ಕೆ ಅವರು, ತಾವು ಅರಮನೆ ಮೈದಾನಕ್ಕೆ ಹೋಗಿದ್ದಾಗಿ ಮತ್ತು ಅಲ್ಲಿ ಪೈಲ್ ಮಾಡೊದು ಅಶ್ಟು ಸುಲಬ ಅಲ್ಲ ಅಂತ ಹೇಳಿದ್ರು. ಆಮೆಲೆ, ಅವರು ಸಾವಿರಾರು ರೂಪಾಯಿ ದುಡ್ಡು ಕೊಟ್ಟು ಸಿಎ ಕಡೆಯಿಂದ ಐಟಿ ರಿಟರ್ನ್ಸ್ ಪೈಲ್ ಮಾಡಿಸಿದ್ರು.
ಯಾಕೆ ಅರಮನೆ ಮೈದಾನದಲ್ಲಿ ಲಕ್ಯಾಂತರ ರೂಪಾಯಿ ಕರ್ಚು ಮಾಡಿ ಅಬಿಯಾನ ಮಾಡ್ತಿರಬೇಕಾದ್ರೆ ಅಲ್ಲಿ ಕೆಲ್ಸ ಸುಲಬವಾಗಿರ್ಬೇಕಾಲ್ವ ಅಂತ ನಾನು ನನ್ನ ತೆರಿಗೆ ಪೈಲ್ ಮಾಡೊಕ್ಕೆ ಅಂತ ಅರಮನೆ ಮೈದಾನಕ್ಕೆ ಹೋದಾಗ ತಿಳಿತು, ಇಲ್ಲಿ ತೆರಿಗೆ ಪೈಲ್ ಮಾಡೊದು ಅಶ್ಟು ಸುಲಬವಲ್ಲ. ಇದು ಬಲೇ ಕಶ್ಟದ ಕೆಲ್ಸ. ಒಳಗೆ ಹೋಗ್ತಿದ್ದಂಗೆ ನನಗೆ ಅಯ್ಯೋ ಮತ್ತೇನಾದ್ರು ಇಂಗ್ಲೀಶ್ ನವರು ಇಲ್ಲಿ ಆಡಳಿತ ಶುರು ಮಾಡಿದ್ರ ಅನ್ನೊ ಆತಂಕ ಆಯ್ತು. ಯಾಕಂದ್ರೆ ಇಲ್ಲಿನ ವ್ಯವಸ್ತೆಗಳು ಇಂಗ್ಲೀಶ್ ಗೊತ್ತಿರುವವರಿಗೆ ಮಾತ್ರ! ಸರಿ ಇಲ್ಲಿ ಕೆಲವು ಪುಸ್ತಕಗಳನ್ನ ಮಾರ್ತಿದ್ರು ಅಲ್ಲಿ ಹೋಗಿ ನೊಡೋಣ ಕನ್ನಡದ ತೆರಿಗೆ ಗೆ ಬಗೆಗಿನ ಪುಸ್ತಕ ಇದ್ಯ ನೊಡಿದ್ರೆ ಅಲ್ಲಿದಿದ್ದು ಬರಿ ಇಂಗ್ಲೀಶ್ ಮತ್ತು ಹಿಂದಿ ಪುಸ್ತಕಗಳು.
ಇದನ್ನೆಲ್ಲಾ ನೋಡಿದ್ರೆ, ಪ್ರತಿ ವರ್ಶ ಕನ್ನಡಿಗರಿಂದ ಲಕ್ಯಾಂತರ ಕೊಟಿ ಹಣ ಆದಾಯ ತೆರಿಗೆ ಇಲಾಕೆಗೆ ಹೋಗುತ್ತೆ. ಆದ್ರೆ ತೆರಿಗೆ ಬಗ್ಗೆ ತಿಳಿಯೋಕ್ಕೆ ಒಂದೇ ಒಂದು ಪುಸ್ತಕ ಕೂಡ ಕನ್ನಡದಲ್ಲಿ ಇಲ್ಲ, ಅಪ್ಲಿಕೇಶನ್, ಸೂಚನೆಗಳಿರೋ ನಾಮಪಲಕಗಳಲ್ಲಿ ಎಲ್ಲೂ ಕರ್ನಾಟಕದ ಜನ ಬಳಸೋ ಬಾಶೆ ಕನ್ನಡಕ್ಕೆ ಒಂದೇ ಒಂದು ಚಿಕ್ಕ ಸ್ತಾನ ಕೂಡ ಇಲ್ಲ. ತೆರಿಗೆ ರಿಟರ್ನ್ ಪೈಲ್ ಮಾಡಬೇಕು ಅಂದ್ರೆ ಇಂಗ್ಲಿಶ್ ಅತವಾ ಹಿಂದಿ ಗೊತ್ತಿರಬೇಕು ಅನ್ನೊ ತರ ವಾತಾವರಣ ನಿರ್ಮಾಣ ಮಾಡೊಕ್ಕೆ ಹೊರಟಿದೆಯೇ ನಮ್ಮ ಆದಾಯ ತೆರಿಗೆ ಇಲಾಕೆ? ಬಾರತ ಒಕ್ಕೂಟ ವ್ಯವಸ್ತೆಯಲ್ಲಿ ಕನ್ನಡಿಗನಿಗೆ ತನ್ನ ದೇಶದ ಆದಾಯ ತೆರಿಗೆ ನಿಯಮಗಳನ್ನ ತಿಳಿಯಲು ಬೇರೊಂದು ಬಾಶೆ ಕಲಿಯಬೇಕಾದ ವ್ಯವಸ್ತೆ ನಿರ್ಮಿಸಿರುವುದು ಸರಿಯೇ? ಜನರಿಂದ ತೆರಿಗೆ ಒಟ್ಟುಹಾಕೊ ಆದಾಯ ಇಲಾಕೆಯೇ ಕನ್ನಡವನ್ನ ಮರೆತರೇ, ತೆರಿಗೆಯನ್ನ ಬಳೋಸೋ ಇತರೇ ಇಲಾಕೆಗಳಲ್ಲಿ ಕನ್ನಡದ ಕತೇ ಹೇಗೆ ಅನ್ನೊದನ್ನ ಊಹಿಸಿಕೊಳ್ಳಬಹುದು.
ಒಬ್ಬ ಸಾಮಾನ್ಯ ಕನ್ನಡಿಗ ತಾನು ಸುಲಬವಾಗಿ ತೆರಿಗೆ ಬಗ್ಗೆ ಅರ್ತ ಮಾಡಿಕೊಳ್ಳೊಕ್ಕೆ ಮತ್ತು ಸುಲಬವಾಗಿ ತನ್ನ ತೆರಿಗೆ ರಿಟರ್ನ ಪೈಲ್ ಮಾಡೊತರ ವ್ಯವಸ್ತೆಯನ್ನ ಮಾಡೊದ್ರಲ್ಲಿ ನಮ್ಮ ಆದಾಯ ತೆರಿಗೆ ಇಲಾಕೆ ಸಂಪೂರ್ಣವಾಗಿ ವಿಪಲವಾಗಿದೆ. ಇದರಿಂದ ಕನ್ನಡಿಗರು ಬೇರೊಬ್ಬ ವ್ಯಕ್ತಿಯನ್ನ ಅವಲಂಬಿಸುವಂತೆ ಆಗಿರೋದು ನಿಜಕ್ಕೂ ದುರಂತ!
ಮುಂದಿನ ಬಾರಿಯಾದರೂ ಆದಾಯ ತೆರಿಗೆ ಇಲಾಕೆ ತನ್ನ ತಪ್ಪನ್ನ ತಿದ್ದಿಕೊಂಡು ಕನ್ನಡಿಗರ ಸ್ವಾವಲಂಬಿಗಳಾಗಿ ತಮ್ಮ ಆದಾಯ ತೆರಿಗೆ ವಿಶಯವನ್ನ ತಾವೇ ಅರಿತುಕೊಳ್ಳಲು ಅವಕಾಶವಾಗುವಂತೆ ವ್ಯವಸ್ತೆ ಕಲ್ಪಿಸವೇಕೆಂದು ಆಶಿಸುತ್ತೇನೆ.
"ಆಡಳಿತದಲ್ಲಿ ಕನ್ನಡ" ಎಂಬುದು ಆಶ್ವಾಸನೆ ಮಾತ್ರ........ಕರ್ನಾಟಕ ಸರ್ಕಾರಕ್ಕೆ ಸಂಬಂಧಿಸಿದ ಸಾಕಷ್ಟು ವೆಬ್ ಸೈಟುಗಳಲ್ಲಿ ಕನ್ನಡ ಕಾಣೆಯಾಗಿದೆ. ಕನ್ನಡಿಗರು ಹಿಂದಿ ಹಾಗೂ ಇಂಗ್ಲೀಷ್ ಕಲಿಯಲೇಬೇಕಾದ ಅನಿವಾರ್ಯತೆಯನ್ನು ಸರ್ಕಾರವೇ ಸೃಷ್ಟಿ ಮಾಡುತ್ತಿದೆ ಎನಿಸುತ್ತದೆ.
ಪ್ರತ್ಯುತ್ತರಅಳಿಸಿಹೌದು ವಿಜಯ್ ನೀವು ಹೇಳಿದ್ದು ನಿಜ, ಕೇಂದ್ರ ಸರಕಾರ ಬಿಡಿ ನಮ್ಮ ರಾಜ್ಯ ಸರಕಾರ ಕನ್ನಡನ ಮರೆತಿರೋದು ನೋಡಿದ್ರೆ ಇವರಿಗೆ ಕನ್ನಡಿಗರು ಬೇಕ ಅನ್ನೊ ಪ್ರಶ್ನೆ ಮಾಡೂತ್ತೆ.
ಪ್ರತ್ಯುತ್ತರಅಳಿಸಿನಿಜ ಕನ್ನಡಿಗರು ತೆರೆ(ರಿ)ಗೆ ಮರೆಯಾಗಿದ್ದಾರೆ
ಪ್ರತ್ಯುತ್ತರಅಳಿಸಿಹೌದು
ಪ್ರತ್ಯುತ್ತರಅಳಿಸಿ