ಮುಂಬೈನಿಂದ-ಅಹಮದಾಬಾದ್
ತಿರುವನಂತಪುರ- ಚೆನೈ
ಬೆಂಗಳೂರು-ಹೈದರಬಾದ್ ಹೀಗೆ ಭಾರತ ದೇಶದ ಒಳಗೆ ವಿಮಾನದಲ್ಲಿ ಓಡಾಡಿದವರಿಗೆ ಒಂದು ವಿಷಯ ಗಮನಕ್ಕೆ ಬಂದಿರುತ್ತದೆ. ವಿಮಾನವು ಭಾರತದೊಳಗಿನ ಯಾವುದೇ ಊರಿನಿಂದ ಹೊರಡಲಿ/ ತಲುಪಲಿ, ಹೊರಡುವ/ ತಲುಪುವ ಊರಿನ ಭಾಷೆ ಯಾವುದೇ ಇರಲಿ ವಿಮಾನದೊಳಗಿನ ಸುರಕ್ಷತೆ ಮತ್ತು ಇನ್ನಿತರ ಮಾಹಿತಿಗಳನ್ನು ಹಿಂದಿ/ಇಂಗ್ಲೀಶ್ ಭಾಷೆಯಲ್ಲಿ ನೀಡಲಾಗುತ್ತದೆ. ಹಿಂದಿಯೊಂದೇ ಈ ದೇಶದ ಭಾಷೆ ಎನ್ನುವ ಭ್ರಮೆಯಲ್ಲಿರುವ ಭಾರತದ ಕೇಂದ್ರ ಸರಕಾರದ ವಿಮಾನಯಾನ ಸಚಿವಾಲಯವೂ ವಿಮಾನಗಳಲ್ಲಿನ ಈ ಹುಳುಕು ಭಾಷಾ ನೀತಿಗೆ ಒಪ್ಪಿಗೆ ನೀಡಿದೆ.
ಜನಗಣತಿಯ ಆಧಾರದ ಮೇಲೆ ನೋಡಿದರೆ ಭಾರತದಲ್ಲಿ ಹಿಂದಿ ಮಾತೃಭಾಷೆಯನ್ನಾಗಿ ಹೊಂದಿರುವ ಜನರ ಸಂಖ್ಯೆ ಸುಮಾರು 25% ನಷ್ಟಿದೆ ಮತ್ತು ಇಂಗ್ಲೀಶದ ತಿಳಿದಿರುವವರ ಸಂಖ್ಯೆ ಸುಮಾರು 7% ಇದೆ. ವಿಮಾನಯಾನ ಸಚಿವಾಲಯದ ಒಪ್ಪಿಗೆ ಮೇರೆಗೆ ಬಳಸಲಾಗುತ್ತಿರುವ ಭಾಷಾ ನೀತಿಯು ಹಿಂದಿ/ಇಂಗ್ಲೀಶ್ ಗೊತ್ತಿಲ್ಲದ ಜನರಿಗೆ ತಮ್ಮ ಜೀವಕ್ಕೆ ಬೆಲೆ ಇಲ್ಲವೇ ಎನ್ನುವ ಪ್ರಶ್ನೆ ಮಾಡಿಕೊಳ್ಳುವಂತೆ ಮಾಡಿದೆ.
ಸಾವಿರಾರು ಕೋಟಿ ವ್ಯವಹಾರ ನಡೆಸುವ ವಿಮಾನಯಾನ ಕ್ಷೇತ್ರದಲ್ಲಿ ಜಗತ್ತಿನಾದ್ಯಂತ ಬಳಕೆಯಲ್ಲಿರುವಂತೆ ವಿಮಾನ ಹೊರಡುವ ಮತ್ತು ತಲುಪುವ ಊರಿನ ಭಾಷೆಯನ್ನು ಬಳಕೆ ಮಾಡುವುದೇನು ದೊಡ್ಡ ವಿಷಯವಲ್ಲ.
ವಿಮಾನಯಾನ ಸಚಿವಾಲಯು ಈ ಬಗ್ಗೆ ಗಮನಹರಿಸಿ, ಹೊರಡುವ/ ತಲುಪುವ ಊರಿನ ಭಾಷೆಯನ್ನು ಒಳಗೊಂಡಂತೆ ಭಾಷಾ ನೀತಿ ರೂಪಿಸಬೇಕೆಂದು ಎಲ್ಲಾ ವಿಮಾನಯನ ಕಂಪನಿಗಳಿಗೆ ಆದೇಶಿಸಬೇಕೆಂದು ಒತ್ತಾಯಿಸೋಣ
https://www.change.org/p/sri-ashok-gajapatiraju-minister-of-civil-aviation-government-of-india-demand-to-mandate-in-flight-announcements-in-indian-languages
ಚಿತ್ರ-mapsofworld