ಇದೇ ನಿಟ್ಟಿನಲ್ಲಿ ಕಳೆದ ವಾರ ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಕೆಯವರು ಪಡಿತರ ಚೀಟಿಗಳನ್ನ ಹೊಂದಿರದ ಅಹ೯ರಿಗೆ ಪಡಿತರ ಚೀಟಿಯನ್ನ ಆದಶ್ಟು ಬೇಗನೆ ಸಿಗುವಂತೆ ಮಾಡಲು ಒಂದು ವಿಂಬಲೆಯನ್ನ (http://ahara.kar.nic.in/)ನಿರ್ಮಿಸಿದ್ದಾರೆ. ಜೊತೆಗೆ ಅರ್ಜಿಗಳನ್ನ ಈ ವೆಬ್ ಸೈಟ್ ಮೂಲಕವೇ ಸಲ್ಲಿಸಬೇಕು ಎಂಬ ಮಾಹಿತಿಯುಳ್ಳ ಜಾಹಿರಾತನ್ನ ಹಲವಾರು ಪತ್ರಿಕೆಗಳಲ್ಲಿ ನೀಡಿಲಾಗಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಾದಲ್ಲಿ ಈ ಮಿಂಬಲೆಯ ಬಳಕೆ ಅನಿವಾರ್ಯ!!!! ಆದರೆ.... ಈ ಮಿಂಬಲೆಯಲ್ಲೂ ಸಹ ಕನ್ನಡವನ್ನ ಬಳಕೆ ಮಾಡದೇ, ಆಡಳಿತ ಯಂತ್ರವನ್ನ ಸಾಮಾನ್ಯ ಜನರಿಂದ ದೂರವಾಗುವಂತೆ ಮಾಡಿದೆ. ಈ ಮಿಂಬಲೆಯ ಮೂಲಕ ಸರಕಾರ, ಸಾಮಾನ್ಯ ಜನರು ತಮ್ಮ ಪಡಿತರ ಚೀಟಿಯನ್ನ ಸುಲಬವಾಗಿ ಮತ್ತು ಆದಶ್ಟು ಬೇಗನೆ ಪಡೆಯಲು ಇಂಗ್ಲೀಶ್ ಕಲಿಯಬೇಕಾದ ಅನಿವಾರ್ಯತೆಯನ್ನ ನಿರ್ಮಿಸಲು ಹೊರಟಿದೆ.
ಇಂದು ತಂತ್ರಜ್ನಾನ ಮುಂದುವರೆದಿದ್ದು, ಕನ್ನಡವನ್ನ ಇಂಗ್ಲೀಶ್ ನಶ್ಟೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾದ್ಯವಾಗುವಶ್ಟು ಬೆಳೆದಿದೆ ಮತ್ತು ಬೆಳೆಯುತ್ತಿದೆ. ತಂತ್ರಜ್ನಾನದ ಬಳಕೆಯಶ್ಟೇ, ಆ ತಂತ್ರಜ್ನಾನದಲ್ಲಿ ಬಳಕೆಯಾಗಿರುವ ಬಾಶೆಯೂ ಮುಕ್ಯ. ಜನರ ಬಾಶೆಯಲ್ಲಿ ತಂತ್ರಜ್ನಾನವಿದ್ದಲ್ಲಿ ಮಾತ್ರ ಜನರನ್ನ ತಲುಪಲು ಸಾದ್ಯ. ಇದರಿಂದಲೇ ಇಂದು ಗೂಗಲ್, ಪೇಸ್ ಬುಕ್, ಯಾಹೂ ಸೇರಿದಂತೆ ಅನೇಕ ಕಂಪನಿಗಳೂ ಕನ್ನಡ ಬಳಕೆಗೆ ಪ್ರಾಮುಕ್ಯತೆ ನೀಡುತ್ತಿದೆ, ತಂತ್ರಜ್ನಾನದಲ್ಲಿ ಕನ್ನಡವನ್ನ ಬಳಸಿ ತಮ್ಮ ಸೇವೆಯನ್ನ ಸಾಮಾನ್ಯ ಕನ್ನಡಗರಿಗೆ ತಲುಪುವಂತೆ ಮಾಡುತ್ತಿವೆ.
ಒಂದು ವರ್ಗಕ್ಕೆ ಮಾತ್ರ ಅರ್ತವಾಗೋ ಬಾಶೆಯನ್ನ ತಂತ್ರಜ್ನಾನದಲ್ಲಿ ಬಳಸಿ, ಆಡಳಿತ ಯಂತ್ರವನ್ನ ಬಹುಸಂಕ್ಯಾತ ಜನರಿಂದ ದೂರಮಾಡಲು ಹೊರಟಿರುವುದು ಎಶ್ಟು ಸರಿ? ದೂರದ ದೇಶದ ಗೂಗಲ್ ಸೇರಿದಂತೆ ಹಲವಾರು ಕಂಪನಿಗಳಗೆ ತಂತ್ರಜ್ನಾನದಲ್ಲಿ ಕನ್ನಡದ ಬಳಕೆಯ ಪ್ರಾಮುಕ್ಯತೆ ಅರ್ತವಾದದ್ದು ನಮ್ಮ ಸರಕಾರಕ್ಕೆ ಏಕೆ ಅರ್ತವಾಗುತ್ತಿಲ್ಲ?

ಚೆನ್ನಾಗಿ ಬರೆದಿದ್ದೀರ.ಈ ರೀತಿ ಇಂಗ್ಲೀ"ಷಿ" ನ ಹೇರುವಿಕೆ ಸರಿಯಲ್ಲವೆಂದು ನನಗೂ ಅನಿಸುತ್ತದೆ. ಮಾನ್ಯರೇ, "ಜ್ನ" ಬದಲು "ಜ್ಞ" ಬಳಸಬೇಕೆಂದು ವಿನಂತಿ.ಪ್ರೀತಿಯಿಂದ :-)
ಪ್ರತ್ಯುತ್ತರಅಳಿಸಿಅದೇ ರೀತಿ "ಭಾಷೆ", ಸಾ"ಧ್ಯ", ಅ"ಷ್ಟೆ" ಆಗಬೇಕೆಂದು ನನ್ನ ಅನಿಸಿಕೆ. ಬರೆಯುವಾಗ ಮುದ್ರಾರಾಕ್ಷಸನ ಹಾವಳಿಯಿಂದಲೂ ಹಾಗಾಗಿರುವ ಸಾಧ್ಯತೆಯಿದೆ. ಸರಿಪಡಿಸಿಕೊಳ್ಳಬೇಕಾಗಿ ವಿನಂತಿ.
ಪ್ರಶಸ್ತಿ ಅವರೇ,
ಪ್ರತ್ಯುತ್ತರಅಳಿಸಿಉಲಿಯುವಂತೆ ಬರೆಯುವ ಒಂದು ಪ್ರಯತ್ನದಂತೆ ಈ ಬರಹ ಕಾಣುತ್ತಿದೆ ನನಗೆ.
'ಅಶ್ಟೇ' ಆಗಲೀ, 'ಅಷ್ಟೇ' ಆಗಲೀ, ಎರಡನ್ನೂ ನಾನು (ನಾವು) ಓದುವುದು ಒಂದೇ ರೀತಿ.
'ಶ' ಮತ್ತು 'ಷ' ಗಳ ಉಲಿಯುವಿಕೆಯಲ್ಲಿ ಏನಾದರೂ ವೆತ್ಯಾಸ ನಿಮಗೆ ಕಾಣುತ್ತಾ (ಕೇಳುತ್ತಾ)?
ನನಗಂತೂ ಇಲ್ಲ.