ದಿನಾಂಕ ೨.೧೨.೨೦೧೧ ರಂದು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಮೆಟ್ರೋನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮತ್ತು ಬಾಶಾ ನೀತಿಯಲ್ಲಿ ಆಗಿರುವ ಅನ್ಯಾಯ ನೀಗಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನ ನೀಡಿದ್ದರು. ಇದಕ್ಕೆ ಉತ್ತರವಾಗಿ ಮೇಟ್ರೋನಿಂದ ಕರವೇಗೆ ಬಂದಿರುವ ಉತ್ತ್ತರದ ಪ್ರತಿಯನ್ನ ಕರವೇ ವೆಬ್ ಸೈಟ್ (http://karave.blogspot.com/2011/12/krv-horatakke-metrodinda-uttara.html)ನಲ್ಲಿ ಹಾಕಲಾಗಿದೆ.
ಈ ಉತ್ತರದ ಪ್ರಕಾರ ಮೆಟ್ರೋ ನಲ್ಲಿ ಉದ್ಯೋಗಕ್ಕೆ ಕನ್ನಡ ಬಲ್ಲವರನ್ನ ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕೆಂದು ಆದೇಶ ಹೊರಡಿಸಿರುವುದಾಗಿಯೂ ಮತ್ತು ಇದರ ಜೊತೆಗೆ ಬದ್ರತಾ ಸೇವೆ ಮತ್ತು ಸ್ವಚ್ಚತಾ ಕೆಲಸಗಳನ್ನ ಹೊರಗುತ್ತಿಗೆ ನೀಡಲಾಗಿದ್ದು ಅಂತಹಾ ಹೊರಗುತ್ತಿಗೆದಾರ ಏಜೆನ್ಸಿಗಳು ಕೂಡ ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು
ಬಲ್ಲವರನ್ನ ಮಾತ್ರ ನೇಮಿಸಿಕೊಳ್ಳಬೇಕೆಂಬ ಶರತ್ತನ್ನ ವಿದಿಸಿ ಕರಾರನ್ನ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದ್ದು ನಿಜವಾಗಿಯೂ ನಮ್ಮ ಮೆಟ್ರೋನ ಮತ್ತು ಹೊರಗುತ್ತಿಗೆ ಉದ್ಯೋಗಗಳು ಕನ್ನಡ ಬಲ್ಲವರಿಗೆ ಮಾತ್ರ ಎಂಬ ಆದೇಶ ಕಟ್ಟು ನಿಟ್ಟಾಗಿ ಜಾರಿಯಾಗುವಂತೆ ನೊಡಿಕೊಳ್ಳಬೇಕಾಗಿದೆ. ಇದೆಲ್ಲವುದರ ಜೊತೆಗೆ ಮುಕ್ಯವಾಗಿ ಕರ್ನಾಟಕ ರಾಜ್ಯದಲ್ಲಿ ಕನ್ನಡ ಆಡಳಿತ ಬಾಶೆ ಮತ್ತು ತನ್ನ ಎಲ್ಲಾ ಕಚೇರಿ ವ್ಯವಹಾರಗಳನ್ನ ಕನ್ನಡ ಬಾಶೆಯಲ್ಲೆ ವ್ಯವಹರಿಸುವುದು ನಮ್ಮ ಮೆಟ್ರೋ ನ ಜವಾಬ್ದಾರಿಯೆಂದು ಮತ್ತು ಕರ್ನಾಟಕ ಸರಕಾರದ ನೀತಿ ನಿಯಮಗಳಿಗೆ ತಮ್ಮ ಸಂಸ್ತೆಯು ಶ್ರದ್ದೆಯ ಸಹಮತ ಸೂಚಿಸುತ್ತದೆ ಎಂದೂ ಸಹ ಹೇಳಿರುತ್ತಾರೆ. ಇದೇ ನಿಟ್ಟಿನಲ್ಲಿ ನಮ್ಮ ಮೆಟ್ರೋ ತನ್ನ ಅಂತರ್ಜಾಲದಲ್ಲಿ ಕನ್ನಡಕ್ಕೆ ಆದ್ಯತೆಯನ್ನ ನೀಡಿ ಸಾರ್ವಜನಿಕರಿಗೆ ಕನ್ನಡ ಮಾಹಿತಿಯನ್ನ ತಿಳಿಸುವಂತೆ
ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದೂ ಸಹ ತಿಳಿಸಿದ್ದಾರೆ, ಈ ಸುತ್ತೋಲೆ ಜಾರಿರೂಪಕ್ಕೆ ಬಂದರೆ ಮಾತ್ರ ನಿಜಕ್ಕು ಕನ್ನಡಿಗರಿಗೆ ಉಪಯೋಗವಾಗುತ್ತದೆ.
ಇದರ ಜೊತೆಗೆ ಹಿಂದಿ ಬಾಶೆಯ ಬಳಕೆಯ ಬಗ್ಗೆ ನಮ್ಮ ಮೆಟ್ರೋನ ಉತ್ತರ ಮಾತ್ರ ಸಮಂಜಸವಾಗಿಲ್ಲವೆನ್ನಿಸುತ್ತದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದ ಸಂಸ್ತೆಯೆಂದ ಮಾತ್ರಕ್ಕೆ ಹಿಂದಿಯನ್ನ ಬಳಸಿದ್ದಿವಿ ಎನ್ನೊವುದು ಸರಿಯಲ್ಲದ ಕ್ರಮವಾಗಿದೆ.
ಈ ಆದೇಶಗಳ ಬಗ್ಗೆ ಇಲ್ಲಿಯವರೆಗೂ ಎಲ್ಲಿಯೂ ಮೆಟ್ರೋ ಹೇಳಿರುವುದನ್ನ ನಾನೆಂದೂ ಕಂಡಿಲ್ಲ ಮತ್ತು ಕರವೇ ಹೋರಾಟದ ಪಲವಾಗಿ ನೀಡಿರುವ ಉತ್ತರ ನಿಜಕ್ಕೂ ಕರವೇ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಈ ಉತ್ತರದ ಆದಾರದ ಮೇಲೆ ಉದ್ಯೋಗದ ವಿಶಯದಲ್ಲಿ ಮತ್ತು ತನ್ನ ಆಡಳಿತದ ವಿಶಯದಲ್ಲಿ ಹೊರಡಿಸಿರುವ ಆದೇಶಗಳ ಅನುಶ್ಟಾನ ಆಗುವ ವರೆಗೆ ಮೆಟ್ರೋ ಮೇಲೆ ಒತ್ತಡ ಹಾಕುವ ಕೆಲಸದಲ್ಲಿ ಕರವೇ ಜೊತೆಗೆ ಕೈಜೋಡಿಸಬೇಕಾದ್ದು ನಮ್ಮ ಕರ್ತವ್ಯವೆಂದು ಬಾವಿಸುತ್ತೇನೆ. ಇದೆಲ್ಲವುದರ ಜೊತೆಗೆ ಅನಗತ್ಯ ಹಿಂದಿ ಬಳಕೆಯನ್ನ ಸಹ ಕೈಬಿಡುವಂತೆ ಸಹಾ ಒತ್ತಡ
ಹಾಕಬೇಕಾಗಿದೆ.